






ಬೆಳ್ತಂಗಡಿ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ಜೂ.5 ರಂದುವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
“ನಮ್ಮ ಭೂಮಿ ನಮ್ಮ ಜವಾಬ್ದಾರಿ ” ಎಂಬ ಧ್ಯೆಯ ವಾಕ್ಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.


ಶಾಲೆಯ ಆವರಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳು ಘೋಷ ವಾಕ್ಕಗಳನ್ನು ಮತ್ತು ಪರಿಸರ ಗೀತೆಗಳನ್ನು ಹಾಡಿದರು. ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಗೂಡಿ ಶಾಲಾ ಮೈದಾನದ ಸುತ್ತಲೂ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪರಿಸರ ಸಂರಕ್ಷಣೆಯ ಕುರಿತಾದ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿ” ಗಿಡ ಬೆಳೆಸಿ ಜೀವ ಉಳಿಸಿ ಪ್ಲಾಸ್ಟಿಕ್ ಮುಕ್ತ ಸಮಾಜ ನಮ್ಮದಾಗಲಿ” ಎಂಬ ಘೋಷಣೆಗಳು ಎಲ್ಲರ ಗಮನ ಸೆಳೆಯಿತು. ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೂ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಈ ಕಾರ್ಯ ಕ್ರಮದಲ್ಲಿ ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ ಕೆ. ಅವರು ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯ ಶಿಕ್ಷಕಿ ವಿಜಯ ಕೆ. ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.









