ಜೂ.6: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಲೋಕಾರ್ಪಣೆ

0

ಉಜಿರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಉತ್ಥಾನ’ ಜೂ.6ರಂದು ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಹಾಗೂ ಬ್ಯಾಕಿಂಗ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ.

ಶಾಸಕ ಹರೀಶ್ ಪೂಂಜ ಭದ್ರತಾ ಕೊಠಡಿ, ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್ ಸಭಾಂಗಣವನ್ನು, ಮಂಗಳೂರು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪಡಿತರ ವಿಭಾಗವನ್ನು, ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಲಿಫ್ಟ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಮೀಟಿಂಗ್ ಹಾಲ್ ಉದ್ಘಾಟಿಸಲಿದ್ದಾರೆ.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣಪಡ್ವೆಟ್ನಾಯ ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆ ಮತ್ತು ದ.ಕ. ಜಿ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಸಹಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಉಜಿರೆ ಸಹಕಾರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳ್ತಂಗಡಿ ಸಹಕಾರಿ ಯೂನಿಯನ್ ಅಧ್ಯಕ್ಷ, ಸಹಕಾರ ರತ್ನ ಸತೀಶ್ ಕಾಶಿಪಟ್ಣ, ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್ ಹೆಚ್. ಎನ್., ಪುತ್ತೂರು ಉಪ ವಿಭಾಗ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಚಿವ ಯು.ಟಿ.ಖಾದರ್ ಚಾಲನೆ ನೀಡಲಿದ್ದಾರೆ. ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಜಿ. ಭೀಡೆ, ಉಜಿರೆ ಸಂತ ಅಂತೋನಿ ಚರ್ಚ್ ಧರ್ಮಗುರು ರೆ. ಫಾ. ಅಬೆಲ್ ಲೋಬೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಹಿಪ್ ಬಾಯ್ಸ್ ಡ್ಯಾನ್ಸ್ ಕ್ರೀವ್ ತಂಡದಿಂದ ಗಾನ ನೃತ್ಯ, ರಾತ್ರಿ ಮಂಗಳೂರಿನ ಸಾಯಿಶಕ್ತಿ ಕಲಾ ಬಳಗ ಉರ್ವ ಚಿಲಿಂಬಿ ತಂಡದಿಂದಜೋಡು ಜೀಟಿಗೆ’ ತುಳು ಜನಪದ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಉಜಿರೆ ಸಹಕಾರಿ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಶ್ರೀಧರ ಪೂಜಾರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸರಸ್ವತಿ ರೈ ತಿಳಿಸಿದ್ದಾರೆ.

ಕಾರ್ಯಕ್ರಮದ ಯಶಸ್ವಿಗೆ ಸಂಘದ ನಿರ್ದೇಶಕರುಗಳಾದ ಅರುಣ್ ಕುಮಾರ್, ರಜತ್ ಗೌಡ, ಪುಷ್ಪಾವತಿ ಆರ್. ಶೆಟ್ಟಿ, ವಾರಿಜ ಎಸ್. ಗೌಡ, ಗುರುರಾಜ್, ಅರವಿಂದ ಕಾರಂತ್, ಅನಿಲ್ ಪ್ರಕಾಶ್ ಡಿ’ಸೋಜಾ, ಅಣ್ಣು ನಾಯ್ಕ, ಸಾಧು ಎಂ. ಸುದರ್ಶನ್ ಹಾಗೂ ಸಿಬ್ಬಂದಿ ವರ್ಗದವರು ಸಹಕಾರ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here