ಓಡಿಲ್ನಾಳ: ಸ.ಉ.ಪ್ರಾ ಶಾಲೆಯಲ್ಲಿ ಪರಿಸರ ದಿನಾಚರಣೆ

0

ಓಡಿಲ್ನಾಳ : ಸ. ಉ. ಪ್ರಾ ಶಾಲೆ ಓಡಿಲ್ನಾಳ ದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ 5ರoದು ತಳಿರು ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಶಾಲಾ ಶಿಕ್ಷಕಿ ಶ್ರೀಮತಿ ನಯನ.ಟಿ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.

ಮುಖ್ಯ ಶಿಕ್ಷಕಿ ಉಷಾ. ಪಿ ಕಾರ್ಯಕ್ರಮವನ್ನು ನಿರೂಪಿಸಿ,ಧನ್ಯವಾದ ನೀಡಿದರು ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತಿತರರು ಉಪಸ್ಥಿತರಿದ್ದರು ಶಾಲಾ ವಿದ್ಯಾರ್ಥಿಗಳು ಹೂವಿನ ಗಿಡ ಹಾಗೂ ಹಣ್ಣಿನ ಗಿಡಗಳನ್ನು ತಂದು ಸಹಕರಿಸಿದರು.

LEAVE A REPLY

Please enter your comment!
Please enter your name here