ಬಡಕೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ ಶಾಲೆಯಲ್ಲಿ ದಾನಿಗಳು ಕೊಡ ಮಾಡಿದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.5 ರಂದು ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಪ್ರಕಾಶ್ ಪಾದೆಮನೆ, ವಿನುತಾ ಪ್ರಕಾಶ್, ವಿಮಲಾ ರಾಜು ಪೂಜಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾವು ಉಚಿತವಾಗಿ ಕೊಡಮಾಡಿದ ಪುಸ್ತಕಗಳನ್ನು ಅಂಗನವಾಡಿ ಮಕ್ಕಳಿಗೆ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿನುತಾ ಪ್ರಕಾಶ್ ವಿದ್ಯಾರ್ಥಿಗಳು ತಮಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಕಲಿತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸಹಾಯಕಿ ಶ್ವೇತಾ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಅರ್ಪಿತಾ ಸ್ವಾಗತಿಸಿದರು. ಶಿಕ್ಷಕ ಸಹಶಿಕ್ಷಕ ಗಣರಾಜ್ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here