ನಡ ಸರಕಾರಿ ಶಾಲಾ ಆವರಣಕ್ಕೆ ಇಂಟರ್ಲಾಕ್ ಕೊಡುಗೆ: ಉದ್ಯಮಿ ಮೋಹನ್ ಕುಮಾರ್ ಉಜಿರೆಗೆ ಗೌರವಾರ್ಪಣೆ

0

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ಉಜಿರೆ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಶಾಲೆಯ ಅವರಣಕ್ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಇವರು ಸುಮಾರು ಮೂರುವರೆ ಲಕ್ಷ ವೆಚ್ಚದಲ್ಲಿ ಇಂಟರ್ಲಾಕ್ ವ್ಯವಸ್ಥೆಯನ್ನು ಉಚಿತವಾಗಿ ಅಳವಡಿಸಿ ಶಾಲಾ ಪೋಷಕರ ಹಾಗೂ ವಿದ್ಯಾಭಿಮಾನಿಗಳ ಪ್ರೀತಿಗೆ ಪಾತ್ರರಾದರು.

ಶಾಲಾ ಆರಂಭೋತ್ಸವದ ಶುಭವಸರದಲ್ಲಿ ಶಾಲೆಯಲ್ಲಿ ಇವರ ಕೊಡುಗೆಗೆ ಕಿರು ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.. ಈ ಸಂಧರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಎಸ್. ಡಿ. ಎಂ. ಸಿ. ಅಧ್ಯಕ್ಷ ಜನಾರ್ಧನ ನಾಯ್ಕ, ಮುಖ್ಯ ಶಿಕ್ಷಕಿ ಪುಷ್ಪಾ, ಸಹ ಶಿಕ್ಷಕಿ ಸುಜಾತ, ಸಂಧ್ಯಾ ಜೈನ್, ಪೋಷಕರು, ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here