






ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪ್ರಾರ್ಥನಾ ವಿಧಿಯೊಂದಿಗೆ ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ವಿದ್ಯಾರ್ಥಿನಿ ದೀಕ್ಷಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಹಾಡು ಹಾಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿತ್ತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೊ ಡೇಸರವರು ಉಪಸ್ಥಿತರಿದ್ದರು.



ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಪರಿಸರವನ್ನು ಮಾಲಿನ್ಯಗೊಳಿಸಿದರೆ, ಅದರ ಪರಿಣಾಮವನ್ನು ನಾವೇ ಅನುಭವಿಸಬೇಕಾಗುತ್ತದೆ. ನಾವು ಇಂದು ಒಳ್ಳೆಯ ಕೆಲಸ ಮಾಡಿದರೆ, ಅದು ಭವಿಷ್ಯದಲ್ಲಿ ನಮಗೆ ಪ್ರಯೋಜನಕಾರಿಯಾಗುತ್ತದೆ ಎಂದು ಹೇಳಿ ಮಕ್ಕಳಿಗೆ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ದೀಪಿಕಾ ನಿರೂಪಿಸಿ, ಅನ್ಯರ ಸ್ವಾಗತಿಸಿ, ಡೆಝಿಟಾ ಧನ್ಯವಾದಗಳನ್ನು ಸಮರ್ಪಿಸಿದರು.









