ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಳಾಲು: ಶ್ರೀ ಧ. ಮಂ. ಅ.ಪ್ರೌಢ ಶಾಲೆಯಲ್ಲಿ ಇಂದು (ಜೂ.5) ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ, ಭಿತ್ತಿಪತ್ರಿಕೆ ಅನಾವರಣಗೊಳಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ತಿಳಿಸಿದರು. ಶಿಕ್ಷಕಿ ಕೋಕಿಲ, ಪರಿಸರ ದಿನಾಚರಣೆಯ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾರ್ಥಿ ಪ್ರಣಮ್, ದಿನದ ವಿಶೇಷತೆ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ಪರಿಸರ ಸಂರಕ್ಷಣೆಯ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿನಿ ಫಾತಿಮತ್ ಸಫೀರ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here