







ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಪ್ರಾರಂಭೋತ್ಸವ ಜೂ.6ರಂದು ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ 2026 27ನೇ ಶೈಕ್ಷಣಿಕ ವರ್ಷವನ್ನು ಸಂಭ್ರಮದಿಂದ ಪ್ರಾರಂಭಿಸಲಾಯಿತು.
ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಮಾಡಿ ಸ್ವಾಗತ ನೃತ್ಯದೊಂದಿಗೆ ಸ್ವಾಗತಿಸಲಾಯಿತು. ಹಾಗೂ ಶಾಲಾ ಅಭಿವೃದ್ಧಿಗಾಗಿ ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮುಖಾಂತರ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು.


ಪ್ರಾಂಶುಪಾಲರಾದ ಭಗಿನಿ ಮೋಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಾಲಾ ಕಾಲೇಜು ನಿಯಮಾವಳಿಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ವಿದ್ಯಾರ್ಥಿಗಳಿಗೆ ಮನೋರಂಜನೆಯ ಅಂಗವಾಗಿ ಹಲವಾರು ಆಟಗಳನ್ನು ಆಟವಾಡಿಸಿ ಬಹುಮಾನಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಉಪನ್ಯಾಸಕರು ಹಾಜರಿದ್ದು ವಿದ್ಯಾರ್ಥಿಗಳನ್ನು ಹುರಿದುಂಬಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಭಗಿನಿ ಪವಿತ್ರರವರು ನಿರೂಪಿಸಿದರು.









