







ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಜೂ.8 ರಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಮತ್ತು ಶಾಲೆಯ ಶಿಕ್ಷಕ ವೃಂದದವರು ಶಾಲೆಗೆ ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಹರ್ಷೇಂದ್ರ ಕುಮಾರ್ ಅವರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ಪಡೆದು ಸೂಕ್ತ ಸಲಹೆ ಸೂಚನೆ ನೀಡಿದರು. ಶಾಲೆಯ ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕ ವೃಂದದವರಿಗೆ ಮಾರ್ಗದರ್ಶನದ ಮಾತುಗಳನ್ನು ನುಡಿದರು .









