ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಲೋಹಿತ್ ಎಂ.ಕೆ.ಗೆ ರಾಜ್ಯ ವಿದ್ಯಾರ್ಥಿ ವೇತನ

0

ಬರೆಂಗಾಯ: ಸ.ಉ.ಹಿ.ಪ್ರಾ. ಶಾಲೆ, ಬರೆಂಗಾಯದ ವಿದ್ಯಾರ್ಥಿ ಲೋಹಿತ್ ಎಂ.ಡಿ. ಅವರು 2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆಸಲಾದ ರಾಷ್ಟ್ರೀಯ ಆದಾಯ ಮತ್ತು ಅರ್ಹತಾ ಆಧಾರಿತ ವಿದ್ಯಾರ್ಥಿವೇತನ (N.M.M.S.) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಲೋಹಿತ್ ಎಂ.ಕೆ. ಅವರು ಶ್ರೀಮತಿ ಸಾವಿತ್ರಿ ಎನ್. ಹಾಗೂ ಕರುಣಾಕರ ಎಂ.ಕೆ. ದಂಪತಿಯ ಪುತ್ರರಾಗಿದ್ದು, ಮಠದಪಲ್ಲೆ ನಿವಾಸಿಯಾಗಿದ್ದಾರೆ. ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಹಿನ್ನೆಲೆಯಲ್ಲಿ ಅವರು 9ನೇ ತರಗತಿಯಿಂದ 12ನೇ ತರಗತಿಯವರೆಗೆ ನಾಲ್ಕು ವರ್ಷಗಳ ಕಾಲ ಪ್ರತಿ ತಿಂಗಳು ₹1,000ರಂತೆ ಒಟ್ಟು ₹48,000 ವಿದ್ಯಾರ್ಥಿವೇತನ ಪಡೆಯಲಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ, ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here