







ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ-ಬೆಳಾಲು ಇಲ್ಲಿ ಈ ದಿನ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮುಳಿಯದ ವ್ಯವಸ್ಥಾಪಕ ಲೋಹಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು.ಅದೇ ರೀತಿ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್, ಶಾಲಾ ಮುಖ್ಯ ಶಿಕ್ಷಕ ಸುರೇಶ್ ಹಾಗೂ ಅತಿಥಿ ಶಿಕ್ಷಕಿ ಹರಿಣಾಕ್ಷಿಯವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.









