ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದಿಂದ ವಿಶೇಷ ಪೂಜೆ

0

ನಾವೂರು,ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾವೂರು ಶಕ್ತಿ ಕೇಂದ್ರದ ವತಿಯಿಂದ ನಾವೂರಿನ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಹೆಚ್ಚು ವರ್ಷಗಳ ಕಾಲ ದೇಶದ ಸೇವೆ ಮಾಡಲು ಹಾಗೂ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಪತ್ ಸುವರ್ಣ, ಹರೀಶ್ ಸಾಲಿಯಾನ್, ಡಾ. ಪ್ರದೀಪ್ ನಾವೂರು ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here