ಪ್ರಧಾನಿ ಮೋದಿಗೆ 12ರ ಸಂಭ್ರಮ: ಪಜಿರಡ್ಕ ಸದಾಶಿವೇಶ್ವರ ಸನ್ನಿಧಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

0

ಕಲ್ಮಂಜ: ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳಾಗಿ 12 ವರ್ಷ ಪೂರೈಸಿದ ಪ್ರಯುಕ್ತ, ಕಲ್ಮಂಜದ 87ನೇ ಬೂತಿನ ಬಿಜೆಪಿ ಕಾರ್ಯಕರ್ತರಿಂದ ಪಜಿರಡ್ಕ ಸದಾಶಿವೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ಪ್ರಧಾನಿ ಮೋದಿ ಅವರು ಇನ್ನಷ್ಟು ವರ್ಷಗಳ ಕಾಲ ದೇಶದ ಸೇವೆ ಮಾಡುವಂತ ಆಯುಷ್ಯ, ಆರೋಗ್ಯವನ್ನು ಕರುಣಿಸುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು ಭಾಗವಹಿಸಿ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here