ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಉದ್ಘಾಟನಾ ಸಮಾರಂಭ

0

ಬಳಂಜ: ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ವತಿಯಿಂದ ಅರ್ಪಿಸುವ ಶಾಲಾ ವಾಹನ ಉದ್ಘಾಟನಾ ಸಮಾರಂಭವು ಜೂ.15ರಂದು ಶಾಲಾ ವಠಾರದಲ್ಲಿ ನಡೆಯಿತು. ನೂತನ ಎಲ್.ಕೆ.ಜಿ. ಕೊಠಡಿಯನ್ನು ಹಾಗೂ ಶಾಲಾ ವಾಹನದ ಉದ್ಘಾಟನೆಯನ್ನು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಶ್ವಥ್ ಹೆಗ್ಡೆ ಅವರ ತಂದೆ ಅರುಣ ಹೆಗ್ಡೆ, ಜನಜಾಗೃತಿ ವೇದಿಕೆಯ ಅಧ್ಯಕ್ಷ ವಸಂತ ಸಾಲಿಯಾನ್ ಬಳಂಜ, ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಾಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಬಳಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಲೋಚನಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಳಂಜ ಶಿಕ್ಷಣ ಟ್ರಸ್ಟ್ ನ ಸದಸ್ಯರು, ಶಾಲಾ ಎಸ್ ಡಿ ಎಂ ಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ತಾಯಂದಿರ ಸಮಿತಿಯವರು, ಶಾಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಂಜ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗನಾಥಸ್ವಾಮಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here