







ಕಣಿಯೂರು: ಇಲ್ಲಿನ ಕಣಿಯೂರು ಕಸಬ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ‘ಬೆಸ್ಟ್ ಫೌಂಡೇಶನ್’ ವತಿಯಿಂದ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.


ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ, ಸಂಸ್ಥೆಯ ವತಿಯಿಂದ ಮಕ್ಕಳಿಗೆ ಅಗತ್ಯವಿರುವ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಎಮ್ಸಿ (SDMC) ಅಧ್ಯಕ್ಷರಾದ ಆಶಿಫ್ ಕಾಣಿಯೂರ್, ಪ್ರಮುಖರಾದ ಬಾಲಕೃಷ್ಣ ಕುರಿಯಾಡಿ ಹಾಗೂ ಶಾಲಾ ಉಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದು, ಬೆಸ್ಟ್ ಫೌಂಡೇಶನ್ನ ಈ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.









