






ಉಜಿರೆ: ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜೂನ್ 13 ರಂದು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸರ್ಕಾರಕ್ಕಾಗಿ ಅತ್ಯಂತ ಶಿಸ್ತುಬದ್ಧ ಹಾಗೂ ಯಶಸ್ವಿ ಚುನಾವಣೆಯನ್ನು ನಡೆಸಲಾಯಿತು.
ಪ್ರಜಾಪ್ರಭುತ್ವದ ಮಾದರಿಯಲ್ಲೇ ನಡೆದ ಈ ಚುನಾವಣೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ 8 ವಿದ್ಯಾರ್ಥಿಗಳು ಹಾಗೂ ಉಪ ಮುಖ್ಯಮಂತ್ರಿ ಸ್ಥಾನಕ್ಕೆ 6 ವಿದ್ಯಾರ್ಥಿಗಳು ತೀವ್ರ ಪೈಪೋಟಿ ನಡೆಸಿದ್ದರು. ಶಾಲೆಯ 5, 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಪೊಲೀಸ್ ಸಿಬ್ಬಂದಿಯ ಭದ್ರತೆ ಹಾಗೂ ಮಾರ್ಗದರ್ಶನದೊಂದಿಗೆ ಅತ್ಯಂತ ಶಿಸ್ತಿನಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸಿದರು.


ಶಾಲೆಯ ಮುಖ್ಯಶಿಕ್ಷಕರಾದ ಬಾಲಕೃಷ್ಣ ನಾಯ್ಕ ಅವರು ಚುನಾವಣಾ ಅಧಿಕಾರಿಯಾಗಿ ಜವಾಬ್ದಾರಿ ನಿರ್ವಹಿಸಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ವಿವಿಧ ಚುನಾವಣಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಇಡೀ ಪ್ರಕ್ರಿಯೆಯು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಸಹಕರಿಸಿದರು.ವಿಜೇತರ ವಿವರ:ಮತದಾನದ ಪ್ರಕ್ರಿಯೆ ಮುಕ್ತಾಯಗೊಂಡು ಮತ ಎಣಿಕೆ ನಡೆದ ಬಳಿಕ ಫಲಿತಾಂಶ ಪ್ರಕಟಿಸಲಾಯಿತು.
ವಿದ್ಯಾರ್ಥಿ ನಾಯಕ (ಮುಖ್ಯಮಂತ್ರಿ) ಸ್ಥಾನಕ್ಕೆ ಸ್ಪರ್ಧಿಸಿದ್ದ ಕೌಶಿಕ್ ಕುಮಾರ್ ಹಾಗೂ ಉಪ ನಾಯಕಿ (ಉಪ ಮುಖ್ಯಮಂತ್ರಿ) ಸ್ಥಾನಕ್ಕೆ ಸ್ಪರ್ಧಿಸಿದ್ದ ಕುಮಾರಿ ಶಾನುವಿ ಅವರುಗಳು ಭಾರಿ ಬಹುಮತದೊಂದಿಗೆ ವಿಜಯಶಾಲಿಯಾಗಿ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.









