






ಅರಸಿನಮಕ್ಕಿ: ಜೂನ್ 19: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಅರಸಿನಮಕ್ಕಿಯಲ್ಲಿ ಶಾಲಾ ಸಂಸತ್ತು ಚುನಾವಣೆ ಹಾಗೂ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಚುನಾವಣೆಯಲ್ಲಿ ಗ್ರೀಷ್ಮ ಶಾಲಾ ನಾಯಕಿಯಾಗಿ ಹಾಗೂ ಅನೀಶ್ ಉಪನಾಯಕನಾಗಿ ಆಯ್ಕೆಯಾದರು. ಯಶ್ವಿತ್ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ಬಳಿಕ ನೂತನವಾಗಿ ಆಯ್ಕೆಯಾದ ಮಂತ್ರಿಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಶಾಲೆಯ ಮುಖ್ಯಗುರುಗಳು ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯುತ ಆಡಳಿತದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.









