ಜೂನ್ 21: ಕುಪ್ಪೆಟ್ಟಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ; ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ

0

ಬೆಳ್ತಂಗಡಿ: ಜೂನ್ 21 ರಂದು ವಿಶ್ವದಾದ್ಯಂತ ಆಚರಿಸಲಾಗುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯಲ್ಲಿ ವಿಶೇಷ ಯೋಗ ಕಾರ್ಯಕ್ರಮವನ್ನು ಬೆಳಿಗ್ಗೆ 4:45 ರಿಂದ 7:00 ರವರೆಗೆ ಶ್ರೀ ದುರ್ಗಾಗಣೇಶ ಸಭಾಭವನ ಕುಪ್ಪೆಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಎಸ್‌ಪಿವೈಎಸ್‌ಎಸ್ (SPYSS) ಕರ್ನಾಟಕ, ಮಂಗಳೂರಿನ ಶ್ರೀ ಪತಂಜಲಿ ಯೋಗಶಿಕ್ಷಣ ಫೌಂಡೇಶನ್ (ರಿ) ಮತ್ತು ಉಪ್ಪಿನಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಡೆಯಲಿದೆ.ಆಯುಷ್ (AYUSH) ಪಠ್ಯಕ್ರಮದ ನಿಯಮಾವಳಿಗಳ ಪ್ರಕಾರ ನಡೆಯಲಿರುವ ಈ ಬೃಹತ್ ಕಾರ್ಯಕ್ರಮಕ್ಕೆ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳು ಕೈಜೋಡಿಸಲಿದ್ದಾರೆ.

ಯೋಗಾಸಕ್ತರು, ಸಾರ್ವಜನಿಕರು ಹಾಗೂ ರೋಗಮುಕ್ತ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಶೇಷ ಯೋಗ ಶಿಬಿರದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here