






ಗರ್ಡಾಡಿ: ಸೋನಂದೂರು ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿದಂತೆ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಜೂ.20 ರಂದು ನಡೆದಿದೆ.


ಸೋನಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದಿವೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸಮೀಪದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.









