







ಅಳದಂಗಡಿ : ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಶಾಲೆಯ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೇವನ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಮಾಡಿಸಿ, ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.ಯೋಗಾಭ್ಯಾಸದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮೋಳಿ ಇಲ್ಲಿಕ್ಕ್ಯಲ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕೆಂಬ ಸಂದೇಶವನ್ನು ಈ ಕಾರ್ಯಕ್ರಮವು ಸಾರಿತು.









