ಕಿಲ್ಲೂರು ಸರಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಿಲ್ಲೂರು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಪೈಲಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.

ಶಾಲೆಯ ಯೋಗ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ರವಿ ಪಿ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ಹಾಗೂ ಅವುಗಳ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಶಾಲೆಯ ಎಲ್ಲ ಶಿಕ್ಷಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಪೂರ್ಣ ಸಹಕಾರ ನೀಡಿದರು. ಶಾಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಯೋಗಾಸನಗಳನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here