ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

0

ಉಜಿರೆಯ ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಫಾ. ಡಾ. ವಿಜಯ್ ಲೋಬೊ ಹಾಗೂ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಪಿಕಾ ಶೆಟ್ಟಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ದೀಪಿಕಾ ಶೆಟ್ಟಿ ಅವರು ಯೋಗದ ಮಹತ್ವ, ಅದರ ವೈಜ್ಞಾನಿಕ ಹಿನ್ನೆಲೆ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗವು ಬೀರುವ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವರವಾಗಿ ತಿಳಿಸಿದರು.

ಬಳಿಕ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಆಥಿರೈ ಸಿ., ಕಮಲಿ ಜಿ. ಹಾಗೂ ಲೋಚನ ಆರ್. ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಯಿತು.

ಈ ಯೋಗ ಪ್ರದರ್ಶನವು ಎಲ್ಲರ ಗಮನ ಸೆಳೆಯುವಂತಿತ್ತು.ಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಸಹ ಶಿಕ್ಷಕಿ ವಿನಯಲತಾ ಅವರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here