ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನಾಚರಣೆ: ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸ್ಮರಣೆ

0

ಬೆಳ್ತಂಗಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವಾದ ಇಂದು, ಜೂನ್ 23 ರಂದು ಬೆಳ್ತಂಗಡಿ ಬಿಜೆಪಿ ಮಂಡಲ ಕಚೇರಿಯಲ್ಲಿ ಸಂಸ್ಪರಣೆ ಸಭೆ ನಡೆಯಿತು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ ಸ್ವಾಗತಿಸಿ, ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗ ಮತ್ತು ಕೊಡುಗೆಗಳ ಕುರಿತು ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್. ಅವರು ಡಾ. ಮುಖರ್ಜಿ ಅವರ ಬಲಿದಾನ ದಿನದ ಮಹತ್ವವನ್ನು ಸಭೆಗೆ ತಿಳಿಸಿದರು. ಮಂಡಲ ಉಪಾಧ್ಯಕ್ಷ ಸದಾನಂದ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಚೇರಿ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.ಮಂಡಲ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಭಾರತ ಮಾತೆಯ ಏಕತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here