






ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಭೇಟಿಯಾಗಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ, ಮುಂದಿನ ಕಾರ್ಯಕಲಾಪಗಳಿಗೆ ಶುಭ ಹಾರೈಸಲಾಯಿತು.
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ನಿರ್ದೇಶಕರುಗಳಾದ ರಕ್ಷಿತ್ ಶಿವರಾಂ, ತನುಜಾ ಶೇಖರ, ಚಂದ್ರಶೇಖರ, ಡಾ. ರಾಜಾರಾಮ್ ಹಾಗೂ ಚಿದಾನಂದ ಪೂಜಾರಿ, ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಉಪಸ್ಥಿತರಿದ್ದರು.









