ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

0

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಭುಜಬಲಿ ಅವರು ಉದ್ಘಾಟಿಸಿ ಮಾತನಾಡಿ, ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು.

“ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಈ ಯೋಗ ತರಬೇತಿಯನ್ನು ಸರಕಾರ ಜಾರಿ ಮಾಡುವ ಮೊದಲೇ ತಮ್ಮ ಎಲ್ಲಾ ಸಂಸ್ಥೆಗಳಲ್ಲಿ ನಡೆಸಲು ಉತ್ತೇಜನ ನೀಡಿದ್ದರು. ಆರೋಗ್ಯ ಕಾಪಾಡಿಕೊಳ್ಳಲು ಯೋಗವು ದೈನಂದಿನ ಚಟುವಟಿಕೆಗಳಲ್ಲಿ ಒಂದಾಗಬೇಕು” ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಅವರು ಮಾತನಾಡಿ, “ಯೋಗವು ಆರೋಗ್ಯದ ದಾರಿ ಹಾಗೂ ಸಂತೋಷ ಜೀವನದ ಕೀಲಿ. ಎಲ್ಲಾ ವಿದ್ಯಾರ್ಥಿಗಳು ತಮ್ಮ ದೈನಂದಿನ ದಿನಗಳಲ್ಲಿ ಯೋಗವನ್ನು ರೂಢಿಸಿಕೊಳ್ಳಿ” ಎಂದರು.

ಶಿಕ್ಷಕ ವಿಕಾಸ್ ಆರಿಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಜಿ. ವಂದಿಸಿದರು. ಬಳಿಕ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಯೋಗಾಭ್ಯಾಸ ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here