ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ

0

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಯಾಗಿ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಬೊಮ್ಮಣ್ಣ ಗೌಡರವರು ಆಗಮಿಸಿ ಶಾಲಾ ಹಂತದಲ್ಲಿ ಮಂತ್ರಿಮಂಡಲದ ಸಂಪೂರ್ಣ ವಿಚಾರ ತಿಳಿಸಿದರು ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನಾಯಕರಾಗುವ ಗುಣ ಮೈಗೂಡುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಶೀನಪ್ಪಗೌಡ ರವರು ವಿದ್ಯಾರ್ಥಿಗಳಿಗೆ ಮಂತ್ರಿ ಮಂಡಲದ ಬಗ್ಗೆ ಕಲ್ಪನೆ ಮೂಡುವ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ವಿನೂತನ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.ಮಂತ್ರಿಗಳ ಖಾತೆ ಜವಾಬ್ದಾರಿಯನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಶೀಲಾ ರವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡರವರು ಬೋಧಿಸಿದರು.ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ತೇಜಾವತಿ ಸ್ವಾಗತಿಸಿ ಯಶೋದ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಗೌರೀಶ್ ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here