ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ಹಾಗೂ ಕ್ಲಬ್ ಉದ್ಘಾಟನಾ ಸಮಾರಂಭ

0

ಬೆಳ್ತಂಗಡಿ:- ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 23, ಜೂನ್ 2026 ರಂದು ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ನಾಯಕರುಗಳಿಗೆ ಪದಗ್ರಹಣ ಸಮಾರಂಭ ಹಾಗೂ ಶಾಲಾ ಸಾಂಸ್ಕೃತಿಕ, ಪರಿಸರ, ಗಣಿತ, ವಿಜ್ಞಾನ, ಕ್ರೀಡಾ ಹಾಗೂ ಸಾಹಿತ್ಯ ಕ್ಲಬ್ ನ ಉದ್ಘಾಟನಾ ಸಮಾರಂಭವು ಬಹಳ ಅರ್ಥಪೂರ್ಣವಾಗಿ ಜರುಗಿತ್ತು.

ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ದೀಪ ಉಜ್ವಲಿಸುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ವಕೀಲರಾದ ಶ್ರೀ ಸಂತೋಷ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ನಾಯಕರುಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಮುಖ್ಯ ಅತಿಥಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಮಾತ್ರ ಒಳ್ಳೆಯ ಭವಿಷ್ಯವನ್ನು ರೂಪಿಸಲು ಸಾಧ್ಯ, ಅದೇ ರೀತಿ ಶಾಲಾ ನಾಯಕರಾಗಿ ಆಯ್ಕೆಯಾದ ತಾವು ಸಮಾಜದಲ್ಲಿ ಕೂಡ ಒಳ್ಳೆಯ ಜನನಾಯಕರಾಗಿ ಗುರುತಿಸಿಕೊಳ್ಳಿ ಎಂಬ ಹಿತವಚನವನ್ನು ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಪ್ರೀತಿ ಜಾರ್ಜ್ ರವರು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು ಹಾಗೂ ಕ್ಲಬ್ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ,ಸೃಜನಾತ್ಮಕ ಹಾಗೂ ತಂಡ ಮನೋಭಾವನೆಯನ್ನು ಬೆಳೆಸುತ್ತದೆ ಎಂದು ತಿಳಿಸಿದರು. ಎಲ್ಲಾ ಕ್ಲಬ್ ನ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ವಿವಿಧ ಶೈಲಿಗಳಲ್ಲಿ ಪ್ರದರ್ಶಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಪ್ರೀತಿ ಜಾರ್ಜ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರೆಜಿ ಜಾರ್ಜ್, ಶಾಲಾ ಸಿಬ್ಬಂದಿ ಕಾರ್ಯದರ್ಶಿ ಲಾವಣ್ಯ , ವಿದ್ಯಾರ್ಥಿ ಮಂತ್ರಿ ಮಂಡಲದ ನಾಯಕರುಗಳು, ಕ್ಲಬ್ ನಾಯಕರುಗಳು , ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 8ನೇ ತರಗತಿಯ ಮಾ. ಮಹಮ್ಮದ್ ರೈಯ್ಯಾನ್ ಹಾಗೂ ಕು. ಮೋಕ್ಷಿತ ಕಾರ್ಯಕ್ರಮವನ್ನುನಿರೂಪಿಸಿದರು. ಕು.ವಿಭಾ ಪೋಲಿ ಸ್ವಾಗತಿಸಿದರು ಮತ್ತು ಕು. ಹಿತೈಷಿ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here