







ನಿಟ್ಟಡೆ-ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ಜೂ.25 ರಂದು ವಿದ್ಯಾರ್ಥಿ ಪರಿಷತ್ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್. ರವರು ವಹಿಸಿ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವ ಅಗತ್ಯತೆ ಹಾಗೂ ಅದರ ಮಹತ್ವದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೋನಿಕಾ ಡಿಸೋಜಾ, ಮಾಜಿ ಮುಖ್ಯ ಶಿಕ್ಷಕರು, ಸಂತ ಪೀಟರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿ ಅವರು ವಿದ್ಯಾರ್ಥಿ ಪರಿಷತ್ತಿನ ಮಹತ್ವ ಜವಾಬ್ದಾರಿಗಳು ಹಾಗೂ ನಾಯಕತ್ವದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ಅತಿಥಿಯಾಗಿ ಭಾಗವಹಿಸಿದ್ದ ಶಕ್ತಿ ಕೇಂದ್ರ ಗರ್ಡಾಡಿ ಅಧ್ಯಕ್ಷ ದಿನಕರ ಕುಲಾಲ್ ಅವರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಅಗತ್ಯತೆ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಅದರ ಪಾತ್ರವನ್ನು ವಿವರಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ತಮ್ಮ ಜವಾಬ್ದಾರಿಗಳನ್ನು ಅಧಿಕೃತವಾಗಿ ಸ್ವೀಕರಿಸಿದರು.
ಶಾಲಾ ನಾಯಕರಾಗಿ 9ನೇ ತರಗತಿಯ ಮಾಸ್ಟರ್ ಅರವಿಂದ್, ಸಭಾಪತಿಯಾಗಿ 10ನೇ ತರಗತಿಯ ಮಾಸ್ಟರ್ ಪ್ರಥಮ್ ಕೊಧನ್ಪುರ್, ಶಾಲಾ ಉಪನಾಯಕರಾಗಿ 7ನೇ ತರಗತಿಯ ಮಾಸ್ಟರ್ ಆಯುಷ್ ಟಿ. ಶೆಟ್ಟಿ ಹಾಗೂ ವಿವಿಧ ವಿಭಾಗಗಳ ನಾಯಕರು, ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಶಿಕ್ಷಕ ವೃಂದ, ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಸೌಮ್ಯ ಮತ್ತು ಪ್ರಾಥಮಿಕ ವಿಭಾಗದ ಶಿಕ್ಷಕಿ ಮರಿಟ ಪ್ರೀತಿ ನಿರೂಪಿಸಿ,ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ಅವರು ಸ್ವಾಗತಿಸಿದರು. ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಶಾಂತಿ ವಂದಿಸಿದರು.









