ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

0

ಪಡಂಗಡಿ: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ದೇರಮಾರ್ ಎಂಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂನ್ 26ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಟಿಪ್ಪರ್ ಚಾಲಕ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣ್ಣಿನ ರಸ್ತೆಯಾಗಿದ್ದರಿಂದ ಮರಳಿನ ಭಾರಕ್ಕೆ ಲಾರಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

LEAVE A REPLY

Please enter your comment!
Please enter your name here