






ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜೂ. 27ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮ ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸ್ಪಂದನ ಚಿಕಿಸ್ತಾ ಕೇಂದ್ರದ ಮಾಲೀಕ ಮೆಲ್ಬಿ ಪಿ.ಸಿ ಹಾಗೂ ಯೋಗ ಶಾಲಾ ತಂತ್ರಜ್ಞೆ ಮಂಜು ಜೋಸೆಫ್ ಆಗಮಿಸಿ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ತೃಪ್ತಿ ಸಮುದಾಯ ಸಂಪರ್ಕ ಆರೋಗ್ಯ ಕೇಂದ್ರ ಹೊಂಗಿರಣ ನೆಟ್ವರ್ಕ್ ಕೇಂದ್ರ ಮಂಗಳೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಆದರ್ಶ್ ಪಿ ಎಸ್ ಅವರು ಪ್ರಾಸ್ತವಿಕ ನುಡಿಯನ್ನು ಆಡಿದರು.

ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರು ಹಾಡನ್ನಾಡಿದರು. ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಪುಷ್ಪರವರು ಪ್ರಾರ್ಥನೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾ ನಿಧಿ ಸಂಯೋಜಕಿ ಜಿನಿ ಪಿ. ಜೆ. ರವರು ಎಲ್ಲರನ್ನು ಸ್ವಾಗತಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಶ್ರೇಯಾರವರು ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ನವ ಜೀವನ ಆರೈಕೆ ಬೆಂಬಲ ಸದಸ್ಯೆ ಶಾರದರವರು ವಂದಿಸಿದರು.









