ಆಟಿಸಂ ಮಕ್ಕಳ ಬದುಕಿಗೆ ಆಶಾಕಿರಣ: ಗುರುವಾಯನಕೆರೆಯ ಪ್ರವೀಣ್ ಕುಮಾರ್ ಅವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

0

ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರಿಯೇಟಿವ್ ಸ್ಮೈಲ್ ಆಟಿಸಂ ಸರ್ವಿಸಸ್ ಸಂಸ್ಥೆಯ ಮೂಲಕ ಆಟಿಸಂ ಮಕ್ಕಳ ಜೀವನದಲ್ಲಿ ಭರವಸೆಯ ಬೆಳಕಾಗಿ ಸೇವೆ ಸಲ್ಲಿಸುತ್ತಿರುವ ಗುರುವಾಯನಕೆರೆಯ ಪ್ರವೀಣ್ ಕುಮಾರ್ ಅವರನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಆತ್ಮೀಯವಾಗಿ ಸನ್ಮಾನಿಸಿದರು.

ಆಟಿಸಂ ಮಕ್ಕಳಿಗೆ ವಿಶೇಷ ಶಿಕ್ಷಣ, ತರಬೇತಿ ಹಾಗೂ ಪುನರ್ವಸತಿ ಸೇವೆಗಳನ್ನು ಒದಗಿಸುವ ಮೂಲಕ ಸಮಾಜದಲ್ಲಿ ಮಾದರಿಯ ಸೇವೆಯನ್ನು ಸಲ್ಲಿಸುತ್ತಿರುವ ಪ್ರವೀಣ್ ಕುಮಾರ್ ಅವರ ಸಮಾಜಮುಖಿ ಕಾರ್ಯವನ್ನು ಗುರುತಿಸಿ ಈ ಗೌರವವನ್ನು ನೀಡಲಾಯಿತು.

ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು, ಸಮಾಜದ ವಿಶೇಷ ಮಕ್ಕಳ ಬದುಕಿನಲ್ಲಿ ಆಶಾಕಿರಣವಾಗಿರುವ ಇಂತಹ ಸೇವಾ ಮನೋಭಾವದ ವ್ಯಕ್ತಿಗಳನ್ನು ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸನ್ಮಾನ ಸ್ವೀಕರಿಸಿದ ಪ್ರವೀಣ್ ಕುಮಾರ್ ಅವರು, ಈ ಗೌರವವು ತಮ್ಮ ಸೇವೆಯನ್ನು ಇನ್ನಷ್ಟು ಉತ್ಸಾಹದಿಂದ ಮುಂದುವರಿಸಲು ಪ್ರೇರಣೆ ನೀಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here