







ಧರ್ಮಸ್ಥಳ: ಇಲ್ಲಿನ ಕನ್ಯಾಡಿ-2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಆರೋಗ್ಯಕರ ವೃದ್ಧಿಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರಾದ ಕೆ. ನಂದ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹಾರ್ಟ್ಫುಲ್ನೆಸ್ ಧ್ಯಾನ ಕೇಂದ್ರ, ಕನ್ಯಾಡಿ-2 ಇದರ ತರಬೇತುದಾರರಾದ ವತ್ಸಲ ಮತ್ತು ಶ್ರೀಮತಿ ಸಾವಿತ್ರಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ವಿವಿಧ ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಅಚ್ಚುಕಟ್ಟಾಗಿ ಕಲಿಸಿಕೊಟ್ಟರು.


ಯೋಗದ ಮಹತ್ವ ಮತ್ತು ದೈನಂದಿನ ಜೀವನದಲ್ಲಿ ಅದರ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷೆ ಹೇಮಲತಾ, ಸಮಿತಿಯ ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಹಾಗೂ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗದ ಪ್ರಯೋಜನಗಳನ್ನು ಪಡೆದುಕೊಂಡರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಮತ್ತು ವಂದನಾರ್ಪಣೆಯನ್ನು ನೆರವೇರಿಸಿದರು.









