







ಬೆಳ್ತಂಗಡಿ: ಮಹಿಳಾ ಸಬಲೀಕರಣದ ಭಾಗವಾಗಿ, ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ.) ವತಿಯಿಂದ ಲಿಂಗ ಸಮಾನತೆಯ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಸಂತೋಮ್ ಟವರ್ನಲ್ಲಿರುವ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ, ಸಂಸ್ಥೆಯ ನಿರ್ದೇಶಕರಾದ ಫಾ. ಆದರ್ಶ ಜೋಸೆಫ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಮಹಿಳಾ ಸಬಲೀಕರಣದ ಮಹತ್ವವನ್ನು ವಿವರಿಸಿದರು.


ಮಂಗಳೂರಿನ ಅಡ್ವೊಕೇಟ್ ಸಿಸ್ಟರ್ ಸೌಮ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಲಿಂಗ ಸಮಾನತೆಯ ಅಗತ್ಯತೆ, ಮಹಿಳೆಯರ ಹಕ್ಕುಗಳು ಮತ್ತು ಸಮಾಜದಲ್ಲಿ ಸಮಾನ ಅವಕಾಶಗಳ ಕುರಿತು ಉಪಯುಕ್ತ ಮಾಹಿತಿ ಹಾಗೂ ತರಬೇತಿಯನ್ನು ನೀಡಿದರು.









