







ಬೆಳ್ತಂಗಡಿ: ತಣ್ಣೀರುಪಂತ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜೆ ತರಗತಿ ಉದ್ಘಾಟನೆ ಸಮಾರಂಭ ಜೂ.25 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಶರೀಫ್ ವಹಿಸಿಕೊಂಡರು.ಕಾರ್ಯಕ್ರಮದಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ ಪೊಸಂದೋಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ವಜ್ರಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ ಕರ್ಕೇರ, ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷ ಮಿಥುನ್ ಕುಲಾಲ್, ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆಯ ರಾಜ್ಯ ಸಂಚಾಲಕ ಮೊಯುದ್ದೀನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ರಂಜಿನಿ, ಪುತ್ತಿಲ ಗ್ರಾಮ ಪಂಚಾಯತ್ ಸದಸ್ಯರಾದ ಕಮಲಾಕ್ಷ ಕರ್ಪಾಡಿ, ನಾಟಿ ವೈದ್ಯರಾದ ಕುಶಾಲಪ್ಪ ಗೌಡ, ಯೋಗೀಶ್ ಕುಮಾರ್, ವಿದ್ಯಾಭಿಮಾನಿ ದೇಜಪ್ಪ ಪೂಜಾರಿ ಉಪಸ್ಥಿತರಿದ್ದರು.

ಎಲ್.ಕೆ.ಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಶರೀಫ್ ಉಚಿತವಾಗಿ ನೀಡಿದರು.ಎಸ್.ಡಿ.ಎಮ್.ಸಿ ಸದಸ್ಯರಾದ ಶರೀಫ್ ರವರು ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಬೆಲ್ಟ್ ಗಳನ್ನು ನೀಡಿದರು.










