







ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಲಯನ್ಸ್ ಕ್ಲಬ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 30ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲl ಬಿ.ಮುರಳಿ ಬಲಿಪರವರು ವಹಿಸಿದ್ದರು. ಹಾಗೆಯೇ ಅವರ ಧರ್ಮಪತ್ನಿ ಮನೋರಮ ಬಲಿಪರವರು ಮತ್ತು ಸುಪುತ್ರನಾದ ಮಂದಾರ ಬಲಿಪರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ್ .ಜಿರವರು, ಶಾಲಾ ಆಡಳಿತ ಸಮಿತಿಯ ಸದಸ್ಯ ವಿವೇಕ್ ಶೆಟ್ಟಿಯವರು, ಶಾಲಾ ನಾಯಕ ತೇಜಸ್ ಭಟ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮಾರು 15 ವರ್ಷಗಳಿಂದ ಸತತವಾಗಿ ನೋಟ್ ಪುಸ್ತಕಗಳನ್ನು ನಮ್ಮ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಪುಸ್ತಕ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕಿ ಸೌಮ್ಯ ರವರು ಅತಿಥಿಗಳನ್ನು ಸ್ವಾಗತಿಸಿದರು.
ಶಿಕ್ಷಕಿ ವೈಶಾಲಿಯವರು ಕಾರ್ಯಕ್ರಮ ನಿರೂಪಿಸಿದರು. ಸುಜಾತ ರವರು ಧನ್ಯವಾದ ನೀಡಿ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದರು.









