







ಮುಂಡೂರು : ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಶ್ರೀ ನಾಗಾಂಬಿಕಾ ದೇವಸ್ಥಾನ ಮತ್ತು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಜು.3ರಂದು ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.
ಈ ಸಂದರ್ಭದಲ್ಲಿ ಕಾಶಿಮಠ ವಾರನಾಸಿ ಪರಿವ್ರಾಜಕಾಚಾರ್ಯ ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಂಗವಾಗಿ . ಜು.2 ಗುರುವಾರ ಸಂಜೆ ದೀಪ ಪ್ರಜ್ವಲನೆ, ದೇವತಾ ಪ್ರಾರ್ಥನೆ, ಪಂಚಗವ್ಯ, ಮೇಲನ ಸಹಿತ ಸ್ವಸ್ತಿ ಪುಣ್ಯಾಹ ವಾಚನ, ಭುವರಹ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಕಾರ ಬಲಿ, ಧಾನ್ಯಾಧಿವಾಸ, ಆದಿವಾಸ ಹೋಮ, ಶಯನಾದಿ ವಾಸ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಜು.3ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.36ಕ್ಕೆ ನಾಗಬ್ರಹ್ಮ ದೇವರ ಪ್ರತಿಷ್ಠೆ, ಆಶ್ಲೇಷ ಬಲಿ, ತನು ತಂಬಿಲ, ಮಹಾಪೂಜೆ, ಶ್ರೀ ನಾಗಾಂಬಿಕ ದೇವಿಯ ಸನ್ನಿಧಿಯಲ್ಲಿ ವಿಶೇಷ ಮಹಾ ಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಮೊಕ್ತೇಸರ ರಾಜೀವ, ಕುಟುಂಬ ವರ್ಗದವರು.ಶ್ರೀ ನಾಗಾಂಬಿಕ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.









