






ಬೆಳ್ತಂಗಡಿ, : ಬೆಳ್ತಂಗಡಿ ತಾಲೂಕಿನ ಕಾಪಿನಡ್ಕ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ರಿಕ್ಷಾ ತಿರುಗಿಸುವ ವೇಳೆ ಬೆಂಗಳೂರು ನೋಂದಣಿಯ ಕಾರು ಡಿಕ್ಕಿ ಹೊಡೆದ ಘಟನೆ ಜುಲೈ 7 ರ ಸಂಜೆ ನಡೆದಿದೆ.
ಕಾಪಿನಡ್ಕ ಸಮೀಪ ಆಟೋ ರಿಕ್ಷಾ ರಸ್ತೆ ತಿರುವು ಪಡೆಯುತ್ತಿದ್ದಾಗ, ಹಿಂದಿನಿಂದ ಅತಿವೇಗದಲ್ಲಿ ಬಂದ ಬೆಂಗಳೂರು ನೋಂದಣಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.


ಬಾನೆಟ್ ಜಜ್ಜಿ, ಬಂಪರ್ ಮುರಿದು, ಹೆಡ್ಲೈಟ್ ಒಡೆದು ಹೋಗಿದೆಆಟೋ ರಿಕ್ಷಾದ ಹಿಂಭಾಗಕ್ಕೆ ಸ್ವಲ್ಪ ಹಾನಿಯಾಗಿದ್ದು ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ.
ಇಬ್ಬರೂ ವಾಹನದಲ್ಲಿದ್ದವರು ಸುರಕ್ಷಿತವಾಗಿದ್ದಾರೆ.ಘಟನೆಯ ಬಳಿಕ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಸಂಚಾರಕ್ಕೆ ಅಡಚಣೆಯಾಗಿದ್ದರಿಂದ ಪೊಲೀಸರು ವಾಹನ ಸಂಚಾರವನ್ನು ನಿಯಂತ್ರಿಸಿದರು.









