ಪುದುವೆಟ್ಟು ಶಾಲೆಯಲ್ಲಿ ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ’ ಬಗ್ಗೆ ಮಾಹಿತಿ ಕಾರ್ಯಗಾರ

0

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ’ ಕುರಿತಾದ ಮಾಹಿತಿ ಕಾರ್ಯಕ್ರಮವು ಜು 04 ರಂದು ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮೇಲಿನಡ್ಕ ಉಪ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಪೌಷ್ಟಿಕ ಆಹಾರವನ್ನು ಸೇವಿಸುವುದರ ಮಹತ್ವವನ್ನು ವಿವರಿಸಿದರು. ಅಲ್ಲದೆ, ಪ್ರಸ್ತುತ ಕಾಲದಲ್ಲಿ ಹರಡುತ್ತಿರುವ ವಿವಿಧ ಸಾಂಕ್ರಾಮಿಕ ರೋಗಗಳ ಲಕ್ಷಣಗಳು, ಅವುಗಳ ತಡೆಗಟ್ಟುವಿಕೆ ಹಾಗೂ ಸ್ವಚ್ಛತೆಯ ಪಾಲನೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಶಾ ಕಾರ್ಯಕರ್ತೆ ರೇಣುಕಾರವರು ಉಪಸ್ಥಿತರಿದ್ದರು.ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here