






ಬೆಳ್ತಂಗಡಿ: ಜಿಲ್ಲಾ ಮತ್ತು ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅದ್ಭುತ ಸಾಧನೆಗೈದ ಕಾಶೀಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಜೈನ್ ಅವರನ್ನು ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡ ಜಿಲ್ಲಾ ಥ್ರೋಬಾಲ್ ತಂಡದ ಪ್ರಮುಖ ಆಟಗಾರ್ತಿಯಾಗಿರುವ ಪದ್ಮಶ್ರೀ ಜೈನ್, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸುವುದರೊಂದಿಗೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಅದ್ವಿತೀಯ ಸಾಧನೆ ಮೆರೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಇವರು ತೋರಿದ ಈ ವಿಶೇಷ ಸಾಧನೆಯನ್ನು ಗುರುತಿಸಿ, ತಾಲೂಕು ಮಟ್ಟದ ಕಾರ್ಯಾಗಾರದಲ್ಲಿ ಶಿಕ್ಷಕರು ಮತ್ತು ಗಣ್ಯರು ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಹೋದ್ಯೋಗಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಪದ್ಮಶ್ರೀ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.









