ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ​

0

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ 8ರಂದು ಸಂಘದ ಕಾರ್ಯಾಲಯದಲ್ಲಿ ಶಾಂತಿಯುತವಾಗಿ ಜರುಗಿತು.​

ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಪ್ರಕಾಶ್‌ ಶೆಟ್ಟಿ ನೊಚ್ಚ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರಾಜು ಶೆಟ್ಟಿ ಮತ್ತು ಉಮೇಶ್‌ ಶೆಟ್ಟಿ ಉಜಿರೆ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.​

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ವಸಂತ್‌ ಶೆಟ್ಟಿ ಶ್ರದ್ವಾ ಹಾಗೂ ಜೊತೆ ಕಾರ್ಯದರ್ಶಿಯಾಗಿ ರವಿ ಶೆಟ್ಟಿ ಸುಕ್ಕೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಸಮುದಾಯದ ಮುಖಂಡರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here