ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ವನಮಹೋತ್ಸವ ಆಚರಣೆ

0

ಉಜಿರೆ, ಜುಲೈ 8: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ (ರಾಷ್ಟ್ರೀಯ ಸೇವಾ ಯೋಜನೆ) ವತಿಯಿಂದ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪ್ರಶಾಂತ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ರಕ್ಷಕರಾದ ಸಂತೋಷ್ ಕುಮಾರ್ ಬಿ ಅವರು ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಉಳಿವಿನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಎನ್‌ಎಸ್‌ಎಸ್ ಸಂಯೋಜಕರಾದ ಡಾ. ಶಾಲ್ಮಲಿ ಸುನೀಲ್ ಸ್ವಾಗತಿಸಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಪದವಿ (ಯು.ಜಿ.) ಹಾಗೂ ಸ್ನಾತಕೋತ್ತರ (ಎಂ.ಡಿ.) ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು .

ಸ್ನಾತಕೋತ್ತರ (ಎಂ.ಡಿ.) ವಿದ್ಯಾರ್ಥಿಗಳು ತಮ್ಮ ಹೆಸರಿನ ನಾಮಫಲಕಗಳನ್ನು ಸಸಿಗಳಿಗೆ ಅಳವಡಿಸಿ ಅವುಗಳನ್ನು ನೆಟ್ಟರು. ಸಸಿಗಳ ಪೋಷಣೆಯ ಜವಾಬ್ದಾರಿಯನ್ನು ಸ್ವೀಕರಿಸುವುದರೊಂದಿಗೆ, ತಾವು ಸಹ ಈ ಸಸಿಗಳಂತೆ ಬೆಳೆದು ಸಮಾಜಕ್ಕೆ ನೆರವಾಗುವ ಮಹಾವೃಕ್ಷಗಳಾಗಲಿ ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ಸಾರಲಾಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ವಂದನಾರ್ಪಣೆ ಸಲ್ಲಿಸಿದರು. ಪರಿಸರ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

LEAVE A REPLY

Please enter your comment!
Please enter your name here