ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜು ಇದರ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನುಸಂಸ್ಥೆಯ ಜೊತೆ ಕಾರ್ಯದರ್ಶಿ ಫಾದರ್ ಜೆರೋಮ್ ಡಿಸೋಜಾ ವಹಿಸಿದ್ದರು. ಇವರು ಮಾತನಾಡಿ ಒಬ್ಬ ಉತ್ತಮ ನಾಯಕ ಎಂದರೆ ಅಧಿಕಾರವನ್ನು ತೋರಿಸುವವನು ಅಲ್ಲ; ತನ್ನ ತಂಡವನ್ನು ಮುನ್ನಡೆಸುವವನು, ಎಲ್ಲರ ಮಾತು ಕೇಳುವವನು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವನು ನಿಮ್ಮ ನಾಯಕತ್ವವು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಾರಾವಿ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಸಂಜಯ್ ಮಿರಾಂದ ಹಾಗೂ ಕಾರ್ಯದರ್ಶಿಯಾಗಿರುವ ಸುಮಿತಾ ಡಿಸೋಜಾ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಸಂತೋಷ್ ಸಾಲ್ದಾನ್ಹ ಹಾಗೂ ವಿದ್ಯಾರ್ಥಿ ಸಂಘದ ಸಂಯೋಜಕಿ ಸೋನಿಯಾ ಡಿಸೋಜಾ ಹಾಜರಿದ್ದರು. ಕಾರ್ಯಕ್ರಮವನ್ನು ಪ್ರಥಮ ವಿಜ್ಞಾನ ವಿಭಾಗದ ಸ್ನೇಹ ಇವರು ನಿರೂಪಿಸಿದರು. ಉಪನ್ಯಾಸಕಿ ರಾಜೇಶ್ವರಿ ವಂದಿಸಿದರು.

LEAVE A REPLY

Please enter your comment!
Please enter your name here