ಕಳ್ಳತನ ಪ್ರಕರಣ: ೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಳ್ತಂಗಡಿಯ ರಾಜೇಶ್ ಸೆರೆ

0

ಬೆಳ್ತಂಗಡಿ: ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು ೩ ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (೪೧)ಬಂಧಿತ ಆರೋಪಿ. ೨೦೧೮ರಲ್ಲಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದರ ಆರೋಪದಲ್ಲಿ ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. ೨೦೪/೨೦೧೮ರಂತೆ ಸೆಕ್ಷನ್ ೩೭೯ ಐಪಿಸಿಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ವಿಟ್ಲ ಠಾಣಾ ಎಎಸ್‌ಐ ಜಯರಾಮ್, ಕಾನ್‌ಸ್ಟೇಬಲ್‌ಗಳಾದ ವೆಂಕಪ್ಪ ಹಾಗೂ ಆನಂದ ಅವರು ಆರೋಪಿಯನ್ನು ಜು.೬ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here