ಪಂಡಿಂಜೆವಾಳ್ಯ ಶಾಲೆಯಲ್ಲಿ ಓಬಿಸಿ ಮೋರ್ಚಾದಿಂದ ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

0

ಬೆಳ್ತಂಗಡಿ, ಜು. 10: ಭಾರತೀಯ ಜನತಾ ಪಕ್ಷದ ತಾಲೂಕು ಹಿಂದುಳಿದ ವರ್ಗ (ಓಬಿಸಿ) ಮೋರ್ಚಾ ವತಿಯಿಂದ ಪಂಡಿಂಜೆ ವಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ತಾಯಿ ಹೆಸರಲ್ಲಿ ಗಿಡ’ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತಾಲೂಕು ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ್ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಉಪಸ್ಥಿತರಿದ್ದು, ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಸಮಾಜದಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯ ಕುರಿತು ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಮತ್ತು ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡಿಕೊಡಿ ಹಾಗೂ ಅನಿತಾ ಕುಕ್ಕೆಡಿ, ಕಾರ್ಯದರ್ಶಿಗಳಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯನ್ (ಕೊಕ್ರಾಡಿ), ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ, ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಓಬಿಸಿ ಮೋರ್ಚಾದ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

LEAVE A REPLY

Please enter your comment!
Please enter your name here