







ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27 до ಕಾರ್ಯಕಾರಿ ಸಮಿತಿಯ ಪದಪ್ರದಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಸಾಂತ್ವನ ನಿಧಿ ಹಸ್ತಾಂತರ, ನೃತ್ಯ ಗಾನ ಸಿಂಚನ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ಸಭಾಭವನದಲ್ಲಿ ಜು.12 ರಂದು ಬೆಳಗ್ಗೆ 9.30 ರಿಂದ ನಡೆಯಲಿದೆ.
ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಉದ್ಘಾಟಿಸಲಿದ್ದಾರೆ. ವಹಿಸಲಿದ್ದಾರೆ. ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.


ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣಾ ಸಮಿತಿ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಗುರುರಾಜ ಗುರಿಪಳ್ಳ, ನಿಯೋಜಿತ ಅಧ್ಯಕ್ಷೆ ಲೀಲಾವತಿ ವಸಂತ ಪೂಜಾರಿ, ಕಾರ್ಯದರ್ಶಿ ಮಧುರ ರಾಘವ, ನಿಯೋಜಿತ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಳಂಜ ತಿಳಿಸಿದ್ದಾರೆ.









