ಜುಲೈ 16 ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

0

ಉಜಿರೆ: ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ.

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.

ಜುಲೈ 16 ರಂದು ಗುರುವಾರ ಮತ್ತು 17 ರಂದು ಶುಕ್ರವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.

ಉದ್ಘಾಟನಾ ಸಮಾರಂಭ: ಜುಲೈ 17 ರಂದು ಬುಧವಾರ ಸಂಜೆ 5 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here