ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

0

ಉಜಿರೆ:ಜು14. “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಪ್ರತ್ಯುಶ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪೃಥ್ವಿ ನಿರೂಪಿಸಿದರು.

LEAVE A REPLY

Please enter your comment!
Please enter your name here