







ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಜು.15 ಬೆಳ್ತಂಗಡಿಗೆ ಭೇಟಿ ನೀಡಲಿದ್ದು, ಸರ್ಕಾರದ ವತಿಯಿಂದ ಮಂಜೂರಾಗಿರುವ ನೂತನ ನ್ಯಾಯಾಲಯ ಸಂಕೀರ್ಣದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ.



ಈ ಕುರಿತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾಹಿತಿ ನೀಡಿದ್ದು, ಇಂದು ಸಂಜೆ ಸರಿಯಾಗಿ 4:00 ಗಂಟೆಗೆ ಸಚಿವರು ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.









