







ಬೆಳ್ತಂಗಡಿ: ಸಂಚಲನ ಮೂಡಿಸಿದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಸಂಪೂರ್ಣ ಚಾರ್ಜ್ ಶೀಟ್(ದೋಷಾರೋಪಣಾ ಪಟ್ಟಿ) ಸಲ್ಲಿಸಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ ಐ ಟಿ ಟೀಂ ಆಗಮಿಸಿದೆ.


ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ.ವರದಿಯೊಂದಿಗೆ ಎಸ್ಐಟಿ ಅಧಿಕಾರಿ ಸೈಮನ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ಆಗಮಿಸಿದೆ.
ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ









