








ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಮಣ್ಣಸಂಕದಲ್ಲಿ ೨೦೧೨ರಲ್ಲಿ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಜು. ೨೧ಕ್ಕೆ ಮುಂದೂಡಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಪಾಂಗಳ ಅವರು ಪ್ರಕರಣದ ಮರುತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು. ಪ್ರಕರಣದ ವಿಚಾರಣೆ ಜು.೧೪ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದಿದ್ದು ಮುಂದಿನ ವಿಚಾರಣೆಯನ್ನು ಜು.೨೧ಕ್ಕೆ ನಿಗದಿ ಪಡಿಸಲಾಗಿದೆ.









